ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಾಗಾರ
ಲಿಂಗಸುಗೂರು : ಸ್ಥಳೀಯ ಸಾಂಸ್ಕøತಿಕ ಭವನದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿನ ಸಫಾಯಿ ಕರ್ಮಚಾರಿಗಳಿಗೆ, ಮ್ಯಾನುವಲ್ ಸ್ಕ್ಯಾವೆಂಜರ್ಸ್‍ಗಳಿಗೆ ಅರಿವು ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಹಾಯಕ ಆಯುಕ್ತ ರಾಜಶೇಖರ ಡಂಬಳ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಪೌರ ಕಾರ್ಮಿಕರು ಕಲುಶಿತ ವಾತಾವರಣದಲ್ಲಿ ಕೆಲಸ ಮಾಡುವಾಗ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕು. ಇದಕ್ಕಾಗಿ ಆರೋಗ್ಯದ ಅರಿವು ಮೂಡಿಸಲು ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರದ ಸದುಪಯೋಗ ಪಡೆದುಕೊಳ್ಳುವ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.
ತಹಸೀಲ್ದಾರ್ ಚಾಮರಾಜ ಪಾಟೀಲ್, ಪುರಸಭೆ ಅದ್ಯಕ್ಷೆ ಗದ್ದೆಮ್ಮಾ ಭೋವಿ, ಉಪಾದ್ಯಕ್ಷ ಮೊಹ್ಮದ್ ರಫಿ, ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಮುದಗಲ್ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ, ಡಾ.ದೇಶ್ಪಾಂಡೆ, ಡಾ.ಶ್ರೀನಿವಾಸ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

