ಲಿಂಗಸುಗೂರು : ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಲಿಂಗಸುಗೂರು : ತಾಲ್ಲೂಕಿನ 10 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು.
ಚುನಾವಣೆ ನಡೆದ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆರು ಪಂಚಾಯತಿಗಳಲ್ಲಿ ಜಯ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆಂದು ಭಾಜಪ ಅಧ್ಯಕ್ಷ ವೀರನಗೌಡ ಪಾಟೀಲ್ ತಿಳಿಸಿದ್ದಾರೆ.

ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್ ರವರು ಕಾರ್ಯಕರ್ತರ, ಮುಖಂಡರ ಪರಿಶ್ರಮಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಜನಪರವಾದ ಆಡಳಿತ ನಡೆಸಿ, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ವಜ್ಜಲ್ ಸೂಚನೆ ನೀಡಿದ್ದಾರೆ.
ಸಧ್ಯಕ್ಕೆ ಬಯ್ಯಾಪುರ, ನಾಗಲಾಪೂರ, ಕಾಚಾಪುರ, ಗುಂತಗೋಳ, ಗೆಜ್ಜಲಗಟ್ಟ, ನೀರಲಕೇರಿ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆದುಕೊಂಡಿದ್ದಾರೆ.

