ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಪ್ರಧಾನಿ ಮೋದಿಯವರ ಆಶಯಗಳ ಈಡೇರಿಕೆಗೆ ಮುಂದಾಗಲು ಕರೆ
ಲಿಂಗಸುಗೂರು : ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಸರಕಾರದ ಆಶಯಗಳನ್ನು ಈಡೇರಿಸಲು ಮುಂದಾಗಬೇಕೆಂದು ಮಹಿಳಾ ಕಾರ್ಯಕಾರಿಣಿಗೆ ಬಿಜೆಪಿ ರಾಜ್ಯ ಉಪಾದ್ಯಕ್ಷೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಶಿವಕೃಷ್ಣಮ್ಮ ಕರೆ ನೀಡಿದರು.
ಸ್ಥಳೀಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಂಡಲ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಹೆಚ್ಚಿನ ಆಸಕ್ತಿ, ಕಾಳಜಿ ವಹಿಸಿ ಸಂಘಟಿತರಾಗಬೇಕು. ಮನೆ-ಮನೆಗೆ ತೆರಳಿ ಸುಕನ್ಯಾ ಸಮೃದ್ಧಿ, ಉಜ್ವಲ ಯೋಜನೆ, ಸ್ತ್ರೀಶಕ್ತಿ ಸಬಲೀಕರಣ ಸೇರಿ ಮಹತ್ವದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಬಲೀಕರಣಕ್ಕೆ ಮುಂದಾಗಬೇಕೆಂದು ಹೇಳಿದರು.
ತಾಲೂಕು ಅದ್ಯಕ್ಷತೆ ಜಯಶ್ರೀ ಸಕ್ರಿ ಸಭೆಯ ಅದ್ಯಕ್ಷತೆ ವಹಿಸಿದ್ದರು. ಪ್ರದಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿ ಸಂಘಟನೆಯು ಕೈಗೊಂಡ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಾ ಕಾರ್ಯಕ್ರಮ ನಿರ್ವಹಿಸಿದರು.
ಮಹಿಳಾ ಮೋರ್ಚಾದ ಜಿಲ್ಲಾದ್ಯಕ್ಷೆ ವಿಜಯರಾಜೇಶ್ವರಿ ಗೋಪಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶರಣಮ್ಮ ಕಾಮರೆಡ್ಡಿ, ಮೋರ್ಚಾದ ಉಸ್ತುವಾರಿಗಳಾದ ಸೀತಾ ನಾಯಕ, ಶಾರದಾ ರಾಠೋಡ್, ಗಂಗೂಬಾಯಿ, ಜಿಲ್ಲಾ ಕಾರ್ಯದರ್ಶಿ ಬಸಮ್ಮ ಯಾದವ್, ಜಿಲ್ಲಾ ಪ್ರಕೋಷ್ಠಗಳ ಪ್ರಭಾರಿ ಜಗನ್ನಾಥ ಕುಲಕರ್ಣಿ, ತಾಲೂಕು ಪ್ರದಾನ ಕಾರ್ಯದರ್ಶಿ ಜ್ಯೋತಿ ಸುಂಕದ್, ನೀಲಮ್ಮ ಪಾಟೀಲ್, ಸ್ಮೀತಾ ಅಂಗಡಿ ಸೇರಿ ಪಕ್ಷದ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಇದ್ದರು.
ಆತ್ಮನಿರ್ಭರ ಭಾರತ ಯೋಜನೆಯಡಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಂಡಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

