ಸುಕ್ಷೇತ್ರ ಅಮರೇಶ್ವರ ಮಠದ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ದೇಣಿಗೆ
ಲಿಂಗಸುಗೂರು : ತಾಲೂಕಿನ ಐತಿಹಾಸಿಕ ಸುಕ್ಷೇತ್ರ ಅಮರೇಶ್ವರ ಸುಕ್ಷೇತ್ರದ ದೇವರಭೂಪೂರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರ ಮಠದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ 5 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಲಾಗಿದೆ.
5 ಲಕ್ಷ ರೂಪಾಯಿಗಳ ಡಿಡಿಯನ್ನು ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಶ್ರೀಗಳಿಗೆ ಹಸ್ತಾಂತರಿಸಿದರು. ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ, ಜೀರ್ಣೋದ್ಧಾರಕ್ಕೆ ಸಂಸ್ಥೆ ಕೈಗೊಳ್ಳುತ್ತಿರುವ ಕಾರ್ಯ ಪ್ರಶಂಸನೀಯವೆಂದು ಶ್ರೀಗಳು ಸಂಸ್ಥೆಗೆ ಹರಸಿದರು.
ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಹನುಮಂತ ನಾಯಕ, ವಲಯ ಯೋಜನಾಧಿಕಾರಿ ಶಂಭುಲಿಂಗ, ದೇವಸ್ಥಾನದ ಅರ್ಚಕರು ಸೇರಿ ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಈ ಸಂದರ್ಭದಲ್ಲಿ ಇದ್ದರು.

