ರಾಯಚೂರು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಪ್ತಾಹ : ಬಾಲ ವಿಜ್ಞಾನಿಗಳ ಮೇಳ

ಲಿಂಗಸುಗೂರು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ತಾಲೂಕಿನ ಬೆಂಡೋಣಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ರಾಯಚೂರು ಇವರ ಸಹಕಾರದೊಂದಿಗೆ ಬಾಲ ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು.

ಸಮೂಹ ಸಂಪನ್ಮೂಲ ವ್ಯಕ್ತಿ ಮುಕ್ತುಂಸಾಬ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜ್ಞಾನ ಚಿತ್ರಗಳ ರಂಗೋಲಿ ಸ್ಪಧೆ, ವಿಜ್ಞಾನಿಗಳ ಜೀವನ ಚರಿತ್ರೆ ಹೇಳುವ ಸ್ಪರ್ಧೆ, ಜೀವನ ಕೌಶಲ್ಯಗಳ ಬಗ್ಗೆ ಪ್ರಬಂಧ ಸ್ಪರ್ಧೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ವಿಜ್ಞಾನ ಶಿಕ್ಷಕ ಚಂದ್ರು ಬೆಂಡೋಣಿಯವರ
ಮಾರ್ಗದರ್ಶನದಲ್ಲಿ ಮಕ್ಕಳೇ ತಯಾರಿಸಿ ವಿಜ್ಞಾನ ಉಪಕರಣಗಳ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಕಡಿಮೆಯಾಗುತ್ತಿದ್ದು, ಪ್ರಸ್ತತ ದಿನಮಾನಗಳಲ್ಲಿ ಇಂಥಹ ಕಾರ್ಯಕ್ರಮಗಳ ಅಗತ್ಯತೆ ಇದೆ. ಮಕ್ಕಳು ಮಾಡಿದ ವಿಜ್ಞಾನ ವಸ್ತು ಪ್ರದರ್ಶನದ ಬಗ್ಗೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹಾಂತೇಶ ಹಳ್ಳೂರು ಪ್ರಶಂಸೆ ವ್ಯಕ್ತಪಡಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಭಾರತ ಜ್ಞಾನ
ವಿಜ್ಞಾನ ಸಮಿತಿ ಕರ್ನಾಟಕದ ಉಪಾದ್ಯಕ್ಷ ಸೈಯದ್ ಹಫೀಸುಲ್ಲಾ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು. ಮುಖ್ಯ ಶಿಕ್ಷಕರಾದ ಪರಮಣ್ಣ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಚಂದ್ರು, ಜಗದೀಶ, ಶಿವಪ್ಪ, ಶಿವಾನಂದ, ಅಮರೇಶ ಕಪನೂರು ಸೇರಿಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!