ಕಾನೂನು ಅರಿವು-ನೆರವು ಕಾರ್ಯಕ್ರಮ
ಲಿಂಗಸುಗೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ಥಳೀಯ ಗುರುಭವನದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕಾಡಳಿತ, ಶಿಶು ಅಭಿವೃದ್ಧಿ ಕಚೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನ್ಯಾಯಮೂರ್ತಿ ಸಂದೀಪ್ ಪಾಟೀಲ್ ಉದ್ಘಾಟಿಸಿದರು.ನ್ಯಾಯವಾದಿಗಳ ಸಂಘದ
ಅದ್ಯಕ್ಷ ಜಂಬಣ್ಣ ಮಂಚಾಲಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಮಹಿಳಾ ಸಬಲೀಕರಣ ಹಾಗೂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಮಾತುಗಳನ್ನು ಗಣ್ಯರು ಹೇಳಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಂಜುನಾಥ ಪಾನಘಂಟಿ, ಸಹಾಯಕ ಸರಕಾರಿ ಅಭಿಯೋಜಕ ವಸಂತ ಪಾಟೀಲ್, ಸಿಡಿಪಿಒ ಶರಣಮ್ಮ ಕಾರನೂರು,ತಹಸೀಲ್ದಾರ ಚಾಮರಾಜ ಪಾಟೀಲ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವಿಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ್, ನ್ಯಾಯವಾದಿ ಪೂಜಾ ಕುಲಕರ್ಣಿ ಸೇರಿ ಇತರರು ಕಾರ್ಯಕ್ರಮದಲ್ಲಿ ಇದ್ದರು.

