ಕರಡಕಲ್ ಸರಕಾರಿ ಶಾಲಾ ಮಕ್ಕಳಿಂದ ಪರಿಸರ ಜಾಗೃತಿ ಜಾಥಾ
ಲಿಂಗಸೂಗೂರು : ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಇಕೋಕ್ಲಬ್ ವತಿಯಿಂದ ಆಯೋಜಿಸಿದ್ದ ಪರಿಸರ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಗ್ರಾಮಸ್ಥರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಶಾಲೆಯಿಂದ ಆರಂಭಗೊಂಡ ಜಾಥಾ ಗ್ರಾಮದ ಅಗಸಿ ಕಟ್ಟೆ,
ಸಿದ್ಧಾರೂಢ ಮಠ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಬಾಬು, ಪರಿಸರದ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಪರಿಸರ ಉಳಿಯುವಿಕೆಗೆ ಮಕ್ಕಳಾದಿಯಾಗಿ ಎಲ್ಲರೂ ಕೈಜೋಡಿಸಬೇಕು.
ಮನೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬೇಕು. ಮನೆಗೊಂದು ಸಸಿ
ನೆಡುವ ಮೂಲಕ ಪರಿಸರ ಬೆಳೆಸಲು ಸಾರ್ವಜನಿಕರು ಮುಂದೆ ಬರಬೇಕೆಂದು ಕರೆ ನೀಡಿದರು.
ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ
ಪಾಲ್ಗೊಂಡಿದ್ದರು.

