ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಶಾಸಕ ಹೂಲಗೇರಿ ಕರೆ
ಲಿಂಗಸುಗೂರು : ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮಹಾಮಾರಿ ಕೊರೊನಾ ತೊಲಗಿಸುವ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಶಾಸಕ ಡಿ.ಎಸ್.ಹೂಲಗೇರಿ, ಎಲ್ಲರೂ ಸ್ವಯಂಪ್ರೇರಿತರಾಗಿ ಆಸ್ಪತ್ರೆಗೆ ಬಂದು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕರೆ ನೀಡಿದರು.
ಬೆಂಗಳೂರು ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಕೊರೊನಾ
ಮಹಾಮಾರಿಯ ಎರಡನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಸಾರ್ವಜನಿಕರು ಮೈಮರೆಯದೇ, ತುರ್ತಾಗಿ ಕೋವಿಶೀಲ್ಡ್ ಲಸಿಕೆಯನ್ನು ಪಡೆದು ಮುಂಬರುವ ಅನಾಹುತವನ್ನು ತಪ್ಪಿಸಿಕೊಳ್ಳಬೇಕೆಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ್, ಪುರಸಭೆ ಉಪಾದ್ಯಕ್ಷ ಮೊಹ್ಮದ್ ರಫಿ, ಮುಖಂಡರಾದ ಪರಶುರಾಮ, ಸುಭಾಸ್ ಚೌಹಾಣ್, ರಮೇಶ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

