ಲಿಂಗಸುಗೂರು : ಟಿ.ಬಿ. ಸೋಲಿಸಿ , ಕರ್ನಾಟಕ ಗೆಲ್ಲಿಸಿ ಅಭಿಯಾನ
ಲಿಂಗಸುಗೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನ ವಿಭಾಗದಿಂದ ಸ್ಥಳೀಯ ಸರಕಾರಿ ಆಸ್ಪತ್ರೆ ಆವರಣದಲ್ಲಿ ಟಿ.ಬಿ. ಸೋಲಿಸಿ, ಕರ್ನಾಟಕ ಗೆಲ್ಲಿಸಿ ಅಭಿಯಾನಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ಚಾಲನೆ ನೀಡಿದರು.
ಈಗಾಗಲೇ ತಾಲೂಕಿನಲ್ಲಿ ಕ್ಷಯರೋಗ ಹರಡುವಿಕೆ,
ನಿಯಂತ್ರಣ, ರೋಗ ಲಕ್ಷಣ ಸೇರಿ ಬೀದಿ ನಾಟಕಗಳ ಮೂಲಕ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಪೂರ್ಣವಾಗಿ ಕ್ಷಯರೋಗ ನಿರ್ಮೂಲನೆಗೆ ಸರಕಾರ ಪಣತೊಟ್ಟಿದ್ದು, ಸಾರ್ವಜನಿಕರೂ
ಸಹಕರಿಸಬೇಕೆಂದು ಆರೋಗ್ಯಾಧಿಕಾರಿಗಳು ಕರೆ ನೀಡಿದರು.
ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ
ಕಾರ್ಯ ನಿರ್ವಹಿಸಿದ ಸಿಬ್ಬಂಧಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಸರಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ್ ಸೇರಿ ಇತರರು ಇದ್ದರು.

