ಲಿಂಗಸುಗೂರು : ಭಾಜಪ ಮಹಿಳಾ ಕಾರ್ಯಕಾರಿಣಿ ಸರಕಾರದ ಸಾಧನೆಗಳ ಮನವರಿಕೆಗೆ ಮುಂದಾಗಲು ಕರೆ
ಲಿಂಗಸುಗೂರು : ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರ ಪರವಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜನಜಾಗೃತಿ ಮೂಡಿಸಲು ಮುಂದಾಗಬೇಕೆಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೊಪಶೆಟ್ಟಿ ಕರೆ ನೀಡಿದರು.
ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸಂಜೆ ನಡೆದ ಮಹಿಳಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಂಡಲ ಅಧ್ಯಕ್ಷೆ ಜಯಶ್ರೀ ಸಕ್ರಿ, ಹಟ್ಟಿಚಿನ್ನದಗಣಿ ಅಧ್ಯಕ್ಷರು ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಅವರ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಭಾಜಪ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲು ಮಹಿಳಾ ಕಾರ್ಯಕರ್ತರು ಪಣ ತೊಡಬೇಕೆಂದು ಕರೆ ನೀಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿ ಸಂಗಡಿಗರು ಕಾರ್ಯಕ್ರಮ ನಿರ್ವಹಿಸಿದರು.
ಮಹಿಳಾ ಮೋರ್ಚಾ ಉಸ್ತುವಾರಿ ಸೀತಾ ನಾಯಕ, ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕಾಟವ, ಸುಷ್ಮ, ಮಂಡಲ ಕಾರ್ಯದರ್ಶಿ ಜ್ಯೋತಿ ಸುಂಕದ, ಸ್ಮಿತಾ ಸೇರಿ ಪದಾಧಿಕಾರಿಗಳು ಸಭೆಯಲ್ಲಿದ್ದರು.

