ಲಿಂಗಸುಗೂರು ಪಿಎಸ್‍ಐ ಡಂಬಳ್‍ಗೆ ಸಿಎಂ ಪದಕ
ಲಿಂಗಸುಗೂರು : ಸ್ಥಳೀಯ ಠಾಣೆ ಪಿಎಸ್‍ಐ ಪ್ರಕಾಶರೆಡ್ಡಿ ಡಂಬಳ್‍ರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪದಕ ನೀಡಿ ಗೌರವಿಸಿದರು.
ಪೋಲಿಸ್ ಇಲಾಖೆಯಲ್ಲಿ ಸಮರ್ಥವಾಗಿ ಆಡಳಿತ ನಡೆಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾಗಿರುವ ಮತ್ತು ಜನರ ಮೆಚ್ಚುಗೆ ಪಡೆದಿರುವ ಅಧಿಕಾರಿಗಳನ್ನು ಗುರುತಿಸಿ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಪಿಎಸ್‍ಐ ಡಂಬಳ್‍ರ ಕಾರ್ಯ ಶ್ಲಾಘನೀಯವಾಗಿದೆ.
ಮುಖ್ಯಮಂತ್ರಿಗಳಿಂದ ಪದಕ ಪಡೆದ ಅಧಿಕಾರಿ ಡಂಬಳ್‍ರಿಗೆ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು, ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

