ಅತ್ಯಾಚಾರ : ಆರೋಪಿಗಳ ಬಂಧನಕ್ಕೆ ಆಗ್ರಹ
ಲಿಂಗಸುಗೂರು : ಅಪ್ರಾಪ್ತೆ ವಿದ್ಯಾರ್ಥಿನಿ ಮಧುಶ್ರೀ ಹುಣಸೂರು ಎನ್ನುವಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ಆಗ್ರಹಿಸಿದರು.
ಶಿರಸ್ತೆದಾರ ಶಾಲಂಸಾಬರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಅಮಾನುಷವಾಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಹತ್ಯೆಯನ್ನೂ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ
ವಿಷಯವಾಗಿದೆ. ಕೂಡಲೇ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಇಂಥಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಸೇನೆ ಅದ್ಯಕ್ಷ ಶಿವಕುಮಾರ ಕಾಳಾಪೂರ, ಕಾರ್ಯಾದ್ಯಕ್ಷ
ಬಸನಗೌಡ ಪಾಟೀಲ್ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

