ಬಿಜೆಪಿ ರಾಜ್ಯ ಉಪಾದ್ಯಕ್ಷರಿಗೆ ಮಹಿಳಾ ಮೋರ್ಚಾ ಸನ್ಮಾನ
ಲಿಂಗಸುಗೂರು : ಬಿಜೆಪಿ ರಾಜ್ಯ ಉಪಾದ್ಯಕ್ಷ ಯುವ ನಾಯಕಬಿ.ವೈ.ವಿಜಯೇಂದ್ರ ಅವರಿಗೆ ತಾಲೂಕು ಮಹಿಳಾ ಮೋರ್ಚಾದ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಮಸ್ಕಿಯಲ್ಲಿ ನಡೆಯುತ್ತಿರುವ ಉಪಚುನಾವಣೆ ನಿಮಿತ್ಯ
ಕ್ಷೇತ್ರದಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ವಿಜಯೇಂದ್ರರನ್ನು ಭೇಟಿ ಮಾಡಿದ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿ ಹಾಗೂ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮಿದೇವಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದಾಗಿದ್ದು, ಸರಕಾರದ ಸಾಧನೆಗಳ ಕುರಿತು ಮತದಾರರ ಮನೆ-ಮನೆಗೆ ತೆರಳಿ ಮನವರಿಕೆ ಮಾಡುವ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಮಹಿಳಾ ಮೋರ್ಚಾ ಶ್ರಮಿಸಬೇಕೆಂದು ವಿಜಯೇಂದ್ರರು ಕಿವಿಮಾತು ಹೇಳಿದರು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.

