ರಾಯಚೂರು

ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸೂಚನೆ



ರಾಯಚೂರು,ಏ೫.- ರಾಜ್ಯ ಹೈಕೋರ್ಟ್ನ ಆದೇಶದಂತೆ ಜಿಲ್ಲೆಯಲ್ಲಿ ಬಾಕಿ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿಗಧಿತ ಅವಧಿಯಲ್ಲಿ ತೆರವುಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯಾನಿರ್ವಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಅವರು ಏ.೫ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ರಸ್ತೆಗಳಲ್ಲಿ, ಉದ್ಯಾನವನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧೀಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸ್ಥಳೀಯ ಸಂಸ್ಥೆಗಳ ಆಡಳಿತದ ಮುಖ್ಯಸ್ಥರು, ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಈ ಕುರಿತಂತೆ ಜಂಟಿಯಾಗಿ ತೆರವು ಕಾರ್ಯಾಚಣೆ ಮಾಡಬೇಕು. ನಿಗದಿತ ದಾಖಲೆಗಳ ಮತ್ತು ೧೯೭೩ ಕಾಯ್ದೆ ಪ್ರಕಾರ ನಿರ್ಮಿತವಾದ ಧಾರ್ಮಿಕ ಕಟ್ಟಡಗಳನ್ನು ಹೊರತುಪಡಿಸಿ ಉಳಿದ ಅನಧಿಕೃತ ಕಟ್ಟಡಗಳನ್ನು ೨೦೨೧ರ ಏಪ್ರಿಲ್ ೭ರಿಂದ ತೆರವುಗೊಳಿಸಿ ವರದಿ ನೀಡುವಂತೆ ತಿಳಿಸಿದರು.


ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು ಸೇರಿದಂತೆ ವಿವಿಧ ತಾಲೂಕಿನ ತಹಶಿಲ್ದಾರರು ಸಭೆಯಲ್ಲಿದ್ದರು.


Leave a Reply

Your email address will not be published. Required fields are marked *

error: Content is protected !!