ಸಾರಿಗೆ ನೌಕರರ ಮುಷ್ಕರಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಬೆಂಬಲ
ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು 7ರಿಂದ ಆರಂಭಿಸುವ ಮುಷ್ಕರಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ತಿಳಿಸಿದರು.
‘ಸಾರಿಗೆ ನೌಕರರು ಡಿಸೆಂಬರ್‌ನಲ್ಲಿ 3 ದಿನಗಳ ಕಾಲ ನಡೆಸಿದ ಮುಷ್ಕರ ಸಂದರ್ಭದಲ್ಲಿ ಸರ್ಕಾರವು ಲಿಖಿತ ರೂಪದಲ್ಲಿ ನೌಕರರ ಎಲ್ಲ 9 ಬೇಡಿಕೆಗಳನ್ನು ಮೂರು ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆರನೇ ವೇತನ ಆಯೋಗದ ಶಿಫಾಸಿನಂತ ವೇತನ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆ. ಸರ್ಕಾರ 7ರ ಒಳಗಾಗಿ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಅವರು ನಡೆಸುವ ಮುಷ್ಕರದಿಂದ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗಲಿದೆ’ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬಿಬುಲ್ಲಾ ಖಾನ್ ಹೇಳಿದರು.

