ರಾಯಚೂರು ವಿ.ವಿ.ಗೆ ಅನುದಾನ ನೀಡಲು ಎಸ್‍ಎಫ್‍ಐ ಒತ್ತಾಯ
ಲಿಂಗಸುಗೂರು : ರಾಯಚೂರು ವಿಶ್ವವಿದ್ಯಾಲಯಕ್ಕೆ ಸರಕಾರದಿಂದ ಅನುದಾನ ಬಿಡುಗಡೆ ಮಾಡುವ ಮೂಲಕ ವಿವಿಯನ್ನು ಬಲಪಡಿಸಬೇಕು ಎಂದು ಎಸ್‍ಎಫ್‍ಐ ಮುಖಂಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಒತ್ತಾಯಿಸಿದರು.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಬಾಕಿ ಇರುವ ವಿದ್ಯಾರ್ಥಿ ವೇತನ, ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಸೇರಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು
ಮುಚ್ಚಿರುವ ತೀರ್ಮಾನ ಅವೈಜ್ಞಾನಿಕವಾಗಿದ್ದು
ಹಿಂಪಡೆದುಕೊಳ್ಳಬೇಕು. 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸದೇ, ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡಬೇಕು. ಸರಕಾರಿ ಸಾರಿಗೆ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡದೇ ಜನವಿರೋಧಿ ನೀತಿಗಳನ್ನು ನೀತಿಗಳನ್ನು ಕೈಬಿಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಹಾಗೂ ಗ್ರಾ.ಪಂ. ಸದಸ್ಯ ರಮೇಶ
ವೀರಾಪೂರ, ಮುಖಂಡರಾದ ವಿರೇಶ ಎಸ್.ಕುಂಬಾರ, ಅಮರೇಶ ಈಚನಾಳ,ದೇವರಾಜ ಕುಂಬಾರ, ಶ್ಯಾಮಣ್ಣ, ಶಿವು ಕಪಗಲ್, ಮುತ್ತುರಾಜ ಸೇರಿ
ಅನೇಕರು ಈ ಸಂದರ್ಭದಲ್ಲಿ ಇದ್ದರು.

