ರಾಜ್ಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಸೇವೆ

ಬೆಂಗಳೂರು : ಹೈಕೋರ್ಟ್ ಆಹಾರ ಭದ್ರತೆಯನ್ನು ಒದಗಿಸಿ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಂತೆ, ನಾಳೆಯಿಂದ ರಾಜ್ಯಾಧ್ಯಂತ ಎಲ್ಲಾ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಚಿತ ಆಹಾರ ವ್ಯವಸ್ಥೆಯನ್ನು ಮಾಡುವಂತೆ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು. ಆದ್ರೇ.. ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲ ಎಂಬುದಾಗಿ ತಿಳಿಸಿತ್ತು. ಆದ್ರೇ.. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲೂ ನಾಳೆಯಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಪೊಟ್ಟಣಗಳ ಮೂಲಕ ಉಚಿತವಾಗಿ ಆಹಾರ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ದಿನಾಂಕ:12-05-2021ರಿಂದ ಬಡವರ್ಗದ ಜನರು, ವಲಸಿಗಲು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು(ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಮೇ 12-05-2021 ರಿಂದ 24-05-2021 ಲಾಕ್‌ಡೌನ್ ಅವಧಿ ಮುಗಿಯುವವರೆಗೆ ಉಚಿತವಾಗಿ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನಿ ಚೀಟಿ(ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಡಿಎಲ್, ಕಾರ್ಮಿಕ ಇಲಾಖೆಯ ಗುರುತಿನ ಚೀಟಿ ಸೇರಿದಂತೆ ಇನ್ನಿತ್ಯಾದಿ ಗುರುತಿನ ಚೀಟಿಗಳು) ಸರಬರಾಜುದಾರರಿಗೆ ಒದಗಿಸಬೇಕು.

ಪ್ರತಿಯೊಬ್ಬ ವ್ಯಕ್ತಿ/ಫಲಾನುಭವಿಗಳಿಗೂ ಗರಿಷ್ಠ 3 ಆಹಾರದ ಪೊಟ್ಟಣಗಳನ್ನು ನೀಡಲಾಗುವುದು ಅಥವಾ ಪಡಿತರ ಚೀಟಿಯಲ್ಲಿ ಕುಟುಂಬದ ಒಟ್ಟು ವ್ಯಕ್ತಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರದ ಪ್ಯಾಕೆಟ್‌ಗಳನ್ನು ನೀಡಲಾಗುವುದು.

ನಗರದ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಆಹಾರ ಪೊಟ್ಟಣಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!