ಲಿಂಗಸುಗೂರು ತಾ.ಪಂ. ಆಡಳಿತಾಧಿಕಾರಿ ಡಾ.ಟಿ.ರೋಣಿ ನೇಮಕ
ಲಿಂಗಸುಗೂರು : ಸ್ಥಳೀಯ ತಾಲೂಕು ಪಂಚಾಯತ್ ಆಡಳಿತ ಮಂಡಳಿಯ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಆಡಳಿತಾಧಿಕಾಯಾಗಿ ಜಿಲ್ಲಾ ಪಂಚಾಯತ್‍ನ ಯೋಜನಾಧಿಕಾರಿ ಡಾ.ಟಿ.ರೋಣಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಬುಧವಾರ ಡಾ. ಟಿ. ರೋಣಿ ಅವರು ಅಧಿಕಾರ ಸ್ವೀಕರಿಸಿದರು. ಕಳೆದ ಐದು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳ ಆಡಳಿತ ಇಂದಿಗೆ ಮುಕ್ತಾಯವಾಗಿದೆ. ಈಗಾಗಲೇ ಜಿ.ಪಂ. ಹಾಗೂ ತಾ.ಪಂ. ಗಳಿಗೆ ಚುನಾವಣೆ ನಡೆಯುವವರೆಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಸರಕಾರ ಆದೇಶಿದೆ.
ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ ಸೇರಿ ಸಿಬ್ಬಂಧಿಗಳು ಈ ಸಂದರ್ಭದಲ್ಲಿ ಇದ್ದರು.

