ರಾಯಚೂರು ಜಿಲ್ಲೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡಲು ಆಲ್ಕೋಡ್ ಒತ್ತಾಯ
ಲಿಂಗಸುಗೂರು : ಕೋವಿಡ್ ಸೊಂಕಿನಿಂದ ರಾಯಚೂರು ಜಿಲ್ಲೆಯಲ್ಲಿ ಬಳಲುತ್ತಿರುವ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ. ವಕ್ತಾರ ಹನುಮಂತಪ್ಪ ವೈ.ಆಲ್ಕೋಡ್ ಒತ್ತಾಯಿಸಿದರು.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ರಾಯಚೂರು ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‍ನಿಂದ ಬಳಲುತ್ತಿರುವ ರೋಗಿಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್ ಸಿಗದೇ ಸಾವನ್ನಪ್ಪಿರುವ ವಿಷಯ ಗಮನಕ್ಕೆ ಬಂದಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಬೆಡ್, ಆಕ್ಸಿಜನ್ ಸಿಗುಂತಾಗಬೇಕು. ಅದಕ್ಕಾಗಿ ಕೋವಿಡ್-19 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಗ್ರಾಮಗಳಲ್ಲಿ ಆರಂಭಿಸಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಜನರ ಸಂಕಷ್ಟಕ್ಕೆ ನೆರವಾಗಬೇಕು. ಉಸ್ತುವಾಗಿ ಸಚಿವರು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಿಗೆ ಭೇಟಿಕೊಟ್ಟು ಅಗತ್ಯ ವೈದ್ಯರು, ಸಿಬ್ಬಂಧಿಗಳನ್ನು ನೇಮಕ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರ ಆಗದಂತೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
ಜನರನ್ನು ರಕ್ಷಿಸುವ ಜವಾಬ್ದಾರಿ ನಮ್ಮಮೇಲಿದೆ. ಸಕಾಲಕ್ಕೆ ಆಕ್ಸಿಜನ್ ಸಿಗದೇ ರೋಗಿಗಳು ಸಾವನ್ನಪ್ಪಿದರೆ, ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತವೇ ನೇರ ಹೊಣೆಗಾರರಾಗುತ್ತಾರೆ. ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರುಗಳು ಪ್ರತಿ ತಾಲೂಕು ಸರಕಾರಿ ಆಸ್ಪತ್ರಗಳಿಗೆ ಒಂದು ಕೋಟಿ ರೂಪಾಯಿ ಕೊಡಬೇಕು. ಇದರಿಂದ ಆಸ್ಪತ್ರೆಗೆ ಬೇಕಾದ ಮೂಲಭೂತ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಸಹಾಯವಾಗುತ್ತದೆ ಎಂದು ಆಲ್ಕೋಡ್ ಒತ್ತಾಯಿಸಿದ್ದಾರೆ.

