ರಾಯಚೂರು

ಕೋವಿಡ್ ಚಿಕಿತ್ಸೆಯಲ್ಲಿ ಕೊರತೆ ಆಗದಂತೆ ಕ್ರಮಕ್ಕೆ ಶಾಸಕರ ಸೂಚನೆ

ಲಿಂಗಸುಗೂರು : ಸರಕಾರಿ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಾಗಿರುವ ಕೋವಿಡ್ ಸೊಂಕಿತರ ಚಿಕಿತ್ಸೆಯಲ್ಲಿ ಯಾವುದೇ ಕೊರತೆ ಆಗದಂತೆ ಎಚ್ಚರಿಕೆಯಿಂದ ಅಗತ್ಯ ಸವಲತ್ತುಗಳನ್ನು ಒದಗಿಸಬೇಕೆಂದು ಶಾಸಕ ಡಿ.ಎಸ್.ಹೂಲಗೇರಿ ಸೂಚನೆ ನೀಡಿದರು.

ಸ್ಥಳೀಯ ಶಾಸಕರ ಕಚೇರಿಯಲ್ಲಿ ಆರೋಗ್ಯ ಇಲಾಖೆ
ಅಧಿಕಾರಿಗಳ ಸಭೆಯಲ್ಲಿ ತಾಲೂಕಿನ ಪ್ರಾಥಮಿಕ ಆರೋಗ್ಯ
ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಸೊಂಕಿತರಿಗೆ ಅಗತ್ಯ ಇರುವ ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾತಿಹಿ ಪಡೆದ ಬಳಿಕ ಮಾತನಾಡಿದ ಅವರು, ಕೋವಿಡ್
ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ
ತಾಲೂಕಾಡಳಿತ ಜಾಗರೂಕತೆಯಿಂದ ಕಾರ್ಯನಿರ್ವಹಿಸುತ್ತಿದೆ.
ಆರೋಗ್ಯ ಇಲಾಖೆಯ ಸೇವೆ ಸಮಾಜಕ್ಕೆ ಅತ್ಯಾವಶ್ಯಕವಾಗಿದೆ.ವೈದ್ಯೋ ನಾರಾಯಣೋ ಹರಿ ಎನ್ನುವಂತೆ ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂಧಿಗಳು ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಹಿರಿಯ ಮುಖಂಡ ಶರಣಪ್ಪ ಮೇಟಿ, ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್,
ಡಾ.ದಿಗಂಬರ್, ಆರೋಗ್ಯ ಇಲಾಖೆ ಸಿಬ್ಬಂಧಿಗಳಾದ ಪ್ರಾಣೇಶ್
ಕುಲಕರ್ಣಿ, ಬಸವರಾಜ, ನಾಗರಾಜ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!