ರಾಯಚೂರು

ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ, ಕೊರೊನಾ ತಡೆಗಟ್ಟಲು ಒತ್ತಾಯ

ಲಿಂಗಸುಗೂರು : ಜಿಲ್ಲೆಯಲ್ಲಿ ಸೊಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳಿಗೆ ಸಕಾಲಕ್ಕೆ ಉತ್ತಮ ಚಿಕಿತ್ಸೆಗ ನೀಡುವ ಜೊತೆಗೆ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡಲು ಮುಂದಾಗಬೇಕೆಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ ಶರಣಪ್ಪ ಮೇಟಿ ಒತ್ತಾಯಿಸಿದರು.


ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಸೋಮವಾರ ಮನವಿ ಸಲ್ಲಿಸಿದ ಅವರು, ಜಿಲ್ಲೆಯಲ್ಲಿ ಆರ್.ಟಿ-ಪಿಸಿಆರ್ ಟೆಸ್ಟ್ ವರದಿ ಎರಡ್ಮೂರು ದಿನಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದು, ಇದರಿಂದ ಪಾಸಿಟಿವ್ ಬಂದ ರೋಗಿಯು ಈ ಅವಧಿಯಲ್ಲಿ ಸರಳವಾಗಿ ಬೇರೆಯವರೊಂದಿಗೆ ಬೆರೆಯುವದರಿಂದ ಇತರರಿಗೂ ಹರಡುವ ಸಾಧ್ಯತೆ ಇದೆ. ಆದ್ದರಿಂದ 24 ಗಂಟೆಯೊಳಗೆ ವರದಿ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸೊಂಕಿತರಿಗೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರ ಮಾಡಬೇಕು. ಕೋವಿಡ್ ಕೇರ್ ಕೆಂದ್ರಗಳಲ್ಲಿ ಪಿಪಿ ಕಿಟ್‍ಗಳ ಪೂರೈಕೆ ಮಾಡಬೇಕು. ಸೊಂಕಿತರಿಗೆ ಪೌಷ್ಠಿಕ ಆಹಾರ ನೀಡಬೇಕು. ಜಿಲ್ಲೆಯಲ್ಲಿ ಲಭ್ಯ ಇರುವ ಎಲ್ಲಾ ಮೊರರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‍ಗಳನ್ನಾಗಿ ಪರಿವರ್ತನೆ ಮಾಡಬೇಕು.

ರಾಯಚೂರು ಓಪೆಕ್ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದ್ದು, ಅದನ್ನು ಸುಧಾರಿಸಲು ರಿಮ್ಸ್ ನಿರ್ದೇಶಕರು ಹಾಗೂ ಸಿಬ್ಬಂಧಿಗಳ ಜೊತೆಗೆ ಚರ್ಚಿಸಿ ಓಪೆಕ್ ಆಸ್ಪತ್ರೆಯಲ್ಲಿ ಸೌಲಭ್ಯಗಳನ್ನು ಒದಗಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಮ್ಲಜನಕ, ರೆಮಿಡಿಸಿವರ್ ಸೇರಿ ಔಷಧಗಳನ್ನು ಸರಬರಾಜು ಮಾಡಬೇಕು. ಕೋವಿಡ್ ನಿಂದ ಮೃತಪಟ್ಟಲ್ಲಿ ಶವ ಸಂಸ್ಕಾರ ಮಾಡಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಪಿಇ ಕಿಟ್ ಲಭ್ಯವಾಗುವಂತೆ ವ್ಯವಸ್ಥೆ ಮಾಡುವುದು. ಶವ ಸಂಸ್ಕಾರಕ್ಕೆ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥೆ ಮಾಡಬೇಕು ಇತರೆ ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಿದರು.


ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಿ.ಎಸ್.ಹೂಲಗೇರಿ, ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ಆಸಿಫ್ ತನ್ವೀರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಸಹಾಯಕ ಆಯುಕ್ತ ರಾಜಶೇಖರ ಡಂಬಳ್, ಡಿವೈಎಸ್‍ಪಿ ಎಸ್.ಎಸ್.ಹುಲ್ಲೂರು, ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಉಪಾದ್ಯಕ್ಷ ಮಹ್ಮದ್ ರಫಿ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!