ಕುಡಿಯುವ ನೀರು ಸರಬರಾಜು ಮಾಡಲು ಒತ್ತಾಯ
ಲಿಂಗಸುಗೂರು : ತಾಲೂಕಿನ ಬಯ್ಯಾಪೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಡಿಸುಂಕಾಪೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಕೂಡಲೇ ವ್ಯವಸ್ಥೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.
ತಾ.ಪಂ. ಅಧಿಕಾರಿಗೆ ಮನವಿ ಸಲ್ಲಿಸಿದ ಅವರು, ಬಂಡಿಸುಂಕಾಪೂರ ಗ್ರಾಮದಲ್ಲಿ ಸುಮಾರು 400 ಕುಟುಂಬಗಳು ವಾಸಿಸುತ್ತಿದ್ದು, ಸಕಾಲಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವಲ್ಲಿ ಪಂಚಾಯತ್ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಪರಿಶೀಲನೆ ಮಾಡಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.
ಶಿವಪ್ಪ, ಕರಿಯಪ್ಪ, ಬಸವರಾಜ, ವೆಂಕೋನ, ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

