ಕಂದಾಯ ಇಲಾಖೆ ಸಿಬ್ಬಂಧಿಗಳಿಂದ ರೋಗಿಗಳಿಗೆ ಆಹಾರ ವಿತರಣೆ
ಲಿಂಗಸುಗೂರು : ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿ-ಸಿಬ್ಬಂಧಿಗಳಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಆಹಾರ ವಿತರಣೆ ಮಾಡಲಾಯಿತು.
ಪಟ್ಟಣದ ಗುಡದನಾಳ ಕ್ರಾಸ್‍ನಲ್ಲಿರುವ ಬಯ್ಯಾಪೂರ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‍ಗೆ ತೆರಳಿದ ಕಂದಾಯ ಇಲಾಖೆ ಸಿಬ್ಬಂಧಿಗಳು ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.
ಸಿಬ್ಬಂಧಿಗಳಾದ ಯಲ್ಲಪ್ಪ, ವಿನಯಕುಮಾರ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

