ರಾಯಚೂರು

ಲಿಂಗಸುಗೂರು : ಶಾಸಕರ ಅಭಿಮಾನಿಗಳಿಂದ ಆಹಾರ ವಿತರಣೆ

ಲಿಂಗಸುಗೂರು : ಕಳೆದ ಐದು ದಿನಗಳಿಂದ ಸ್ಥಳೀಯ ಶಾಸಕ ಡಿ.ಎಸ್.ಹೂಲಗೇರಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಗುತ್ತಿದೆ.

ಶನಿವಾರ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಿ ಮಾತನಾಡಿದ ಪುರಸಭೆ ಸದಸ್ಯ ಮುತ್ತಣ್ಣ ಮೇಟಿ, ಕೊವೀಡ್ ಲಾಕ್‍ಡೌನ್ ಪರಿಣಾಮ ಪಟ್ಟಣದಲ್ಲಿ ಹೊಟೆಲ್, ಅಂಗಡಿಗಳನ್ನು ಮುಚ್ಚಿರುವ ಪರಿಣಾಮ ರೋಗಿಗಳ ಆರೈಕೆಗೆ ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದಿರುವ ಜನರಿಗೆ ಊಟ, ಉಪಹಾರಕ್ಕೆ ತೀವ್ರ ತೊಂದರೆ ಆಗುತ್ತಿರುವುದನ್ನು ಗಮನಿಸಿ ಶಾಸಕರ ಅಭಿಮಾನಿ ಬಳಗದಿಂದ ಲಾಕ್‍ಡೌನ್ ಅವಧಿ ಮುಗಿಯುವವರೆಗೂ ಆಹಾರ ವಿತರಿಸಲು ತೀರ್ಮಾನಿಸಲಾಗಿದ್ದು, ಈ ಕಾರ್ಯ ಕಳೆದ ಐದು ದಿನಗಳಿಂದ ನಡೆಯುತ್ತಿದೆ. ಬರುವ ದಿನಗಳಲ್ಲಿಯೂ ಅಗತ್ಯ ಸೇವೆ ಸಲ್ಲಿಸಲು ನಾವುಗಳು ಸಿದ್ಧರಿದ್ದೇವೆಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಫಲಾನುಭವಿಗಳು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!