ಶತಾಯುಷಿ ದೊರೆಸ್ವಾಮಿ ನಿಧನಕ್ಕೆ ವೆಲ್ಫೇರ್ ಪಾರ್ಟಿ ಅಶ್ರುತರ್ಪಣ
ಬೆಂಗಳೂರು : ತಮ್ಮ ಬದುಕಿನ ಕೊನೆಯವರೆಗೂ ಜನಪರ ಚಳುವಳಿ, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ
ಹೆಚ್.ಎಸ್. ದೊರೆಸ್ವಾಮಿಯವರು ನಿಧನರಾಗಿದ್ದಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಅಶ್ರುತರ್ಪಣ ಸಲ್ಲಿಸಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್,ದೊರೆಸ್ವಾಮಿಯವರು ಮೈಸೂರು ಪತ್ರಕರ್ತರ ಸಂಘ, ಅಖಿಲ ಭಾರತ ಕಾರ್ಯನಿರತ ಪತ್ರಕತ್ರ ಸಂಘ, ಪತ್ರಕರ್ತರ ಸಹಕಾರಿ ಬ್ಯಾಂಕ್, ಭಾರತ ಸೇವಕ ಸಮಾಜ, ಭೂದಾನ ಚಳವಳಿ, ಹನುಮಂತನ ನಗರ ಸಹಕಾರಿ ಬ್ಯಾಂಕ್, ಭಾರತ ಮಾತಾ ವಿದ್ಯಾ ಮಂದಿರ ಶಾಲೆ, ಶಿಕ್ಷಕರ ತರಬೇತಿ ಕಾಲೇಜು, ಮದ್ಯಪಾನ ನಿಷೇಧ, ಕೈಗಾ ಅಣುಸ್ಥಾವರ ವಿರೋಧಿ ಚಳವಳಿ, ಹರಿಹರ ಪಾಲಿಫೈಬರ್ಸ್ ವಿರುದ್ಧದ ಹೋರಾಟ, ನೈಸ್, ಕಾರ್ಗಿಲ್‌ನಂತಹ ಕಂಪನಿಗಳ ವಿರುದ್ಧದ ಹೋರಾಟಗಳು, ಮಂಡೂರು ಹೋರಾಟ, ಭೂಗಳ್ಳರ ಭೂ ಕಬಳಿಕೆ ವಿರೋಧಿ ಹೋರಾಟ, ಭ್ರಷ್ಟಾಚಾರ ವಿರೋಧಿ ಚಳವಳಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರೋಧಿ ಹೋರಾಟಗಳು, ಕಾವೇರಿ ಚಳವಳಿ, ಭೂಮಿ ಮತ್ತು ವಸತಿ ವಂಚಿತರ ಹೋರಾಟ,ಹೀಗೆ ಒಂದಿಲ್ಲೊಂದು ರಚನಾತ್ಮಕ ಚಟುವಟಿಕೆ/ಚಳವಳಿ/ಹೋರಾಟಗಳಲ್ಲಿ ಅವಿಶ್ರಾಂತವಾಗಿ ತಮ್ಮನ್ನು ತೊಡಗಿಸಿಕೊಂಡೇ ಬಂದಿದ್ದಾರೆ. ಅಗಲಿದ ಹಿರಿಯ ಚೇತನಕ್ಕೆ ಸದ್ಗತಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.

