ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
ಲಿಂಗಸುಗೂರು : ಕೋವಿಡ್ ಸೊಂಕು ತಡೆಗೆ ಹೋರಾಟ ಮಾಡುತ್ತಿರುವ ರಾಜ್ಯ ಸರಕಾರಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಂಪನಿ ಅದ್ಯಕ್ಷ ಮಾನಪ್ಪ ವಜ್ಜಲ್ 5 ಕೋಟಿ ರೂಪಾಯಿಗಳ ದೇಣಿಗೆ ನೀಡಿದರು.
ಬುಧವಾರ ಮುಖ್ಯಮಂತ್ರಿಗಳ ಕಚೇರಿಗೆ ತೆರಳಿದ ಅವರು, ಕೋವಿಡ್ ಸಂಕಷ್ಟದ ಕಾಲದಲ್ಲಿ ರಾಜ್ಯ ಸರಕಾರಕ್ಕೆ ಸಹಾಯಾರ್ಥವಾಗಿ 5 ಕೋಟಿ ರೂಪಾಯಿ ಚೆಕ್ ನೀಡಿದರು. ಲಿಂಗಸುಗೂರು ತಾಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೊಂಕು ತಡೆಗಟ್ಟಲು ಸರಕಾರ ಅಗತ್ಯ ನೆರವು ನೀಡಬೇಕು. ತಾಲೂಕಿನ ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧ, ಬೆಡ್‍ಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್‍ರ ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಗತ್ಯ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರೆಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ, ಚಿನ್ನದಗಣಿ ವ್ಯವಸ್ಥಾಪಕ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಸೇರಿ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

