ರಾಯಚೂರು

ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಕ್ರಮಕ್ಕೆ ಶಾಸಕರ ಸೂಚನೆ

ಲಿಂಗಸುಗೂರು : ಪ್ರಸ್ತುತ ಮುಂಗಾರು ಹಂಗಾಮಿನ ತಯಾರಿಗೆ ತಾಲೂಕಿನಲ್ಲಿ ರೈತರು ಭೂಮಿಯನ್ನು ಹದ ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಸೇರಿ ಕೃಷಿ ಉಪಕರಣಗಳ ಕೊರತೆ ಆಗದಂತೆ ಸಂಗ್ರಹಿಸಿಕೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಶಾಸಕ ಡಿ.ಎಸ್.ಹೂಲಗೇರಿ ಸೂಚನೆ ನೀಡಿದರು.

ಸ್ಥಳೀಯ ಶಾಸಕರ ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಎಪಿಎಂಸಿ ಅಧಿಕಾರಿಗಳ ಸಭೆ ನಡೆಸಿದ ಅವರು, ಈಗಾಗಲೇ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಆರಂಭಗೊಂಡಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ನರೇಗಾ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳುವ ಜೊತೆಗೆ ರೈತರಿಗೆ ಅವಶ್ಯಕವಾದ ಪರಿಕರಗಳನ್ನು ಸಕಾಲದಲ್ಲಿ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಹಾಯಕ ಕೃಷಿ ನಿರ್ದೇಶಕ ಮಹಾಂತೇಶ ಹವಾಲ್ದಾರ್, ತೋಟಗಾರಿಕೆ ಇಲಾಖೆ ಸಹಾಯ ನಿರ್ದೇಶಕರು ಹಾಗೂ ಎಪಿಎಂಸಿ ಕಾರ್ಯದರ್ಶಿ ಈ ಸಂದರ್ಭದಲ್ಲಿ ಇದ್ದರು. 

Leave a Reply

Your email address will not be published. Required fields are marked *

error: Content is protected !!