ಕುಡಿಯುವ ನೀರು, ಶಾಲಾ ಕೊಠಡಿ ಕಾಮಗಾರಿಗಳಿಗೆ ಭೂಮಿಪೂಜೆ
ಲಿಂಗಸುಗೂರು : ತಾಲೂಕಿನ ಮಾವಿನಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಂಪೂರ-ಭೂಪೂರ ಗ್ರಾಮದಲ್ಲಿ ಶಾಸಕ ಡಿ.ಎಸ್.ಹೂಲಗೇರಿಯವರು ಸೋಮವಾರ ಕುಡಿಯುವ ನೀರು ಮತ್ತು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 65.22 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಮತ್ತು ಕೆಕೆಆರ್‍ಡಿಬಿ ಯೋಜನೆಯಡಿ 78 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಶಾಸಕರು ಗುತ್ತೇದಾರರಿಗೆ ತಾಕೀತು ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ಪರಸಪ್ಪ ಹುನಕುಂಟಿ, ಹೊನ್ನಪ್ಪ ಮೇಟಿ, ಪರಶುರಾಮ ನಗನೂರು ಸೇರಿದಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.

