ರಾಯಚೂರು

ಪೆಟ್ರೋಲ್,ಅಡುಗೆ ಅನಿಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ DYFI – SFI ಪ್ರತಿಭಟನೆ

ಕವಿತಾಳ : ಪೆಟ್ರೋಲ್, ಡಿಸೇಲ್, ಅಡುಗೆ ಸಿಲಿಂಡರ್ ( ಗ್ಯಾಸ್ ) ವಿದ್ಯುತ್ ಬಿಲ್ ಹಾಗೂ ಆಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ DYFI, SFI ವತಿಯಿಂದ ಪಟ್ಟಣ ಲಿಂಗಸ್ಗೂರು ರಸ್ತೆಯಲ್ಲಿ ಇರುವ ಪೆಟ್ರೋಲ್ ಪಂಪ್ ಮುಂದೆ ಪ್ರತಿಭಟನೆ ಯನ್ನು ಮಾಡಲಾಯಿತು.

ಪ್ರತಿಭಟನೆ ಯನ್ನು ಉದ್ದೇಶಿಸಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಕೊರೊನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಡರ್ ಗೆ 30 ರೂಗಳಷ್ಟು ಬೆಲೆ ಜಾಸ್ತಿ ಆಗಿದೆ. 2014 ರಲ್ಲಿ 400 ರೂಗಳಿದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಈಗ 850 ರೂ ಆಗಿದೆ. ಈ ಕಾಲದಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿಗಾಯದ ಮೇಲೆ ಬರೆ ಎಳೆದಿದೆ ಇದು ಜನದ್ರೋಹಿ ಕೆಲಸ ಎಂದು ಹೇಳಿದರು.

ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನೀಡಿರುವ ಕಾರಣಗಳು ಜನರನ್ನು ತಪ್ಪುದಾರಿಗೆಳೆಯುವಂತಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು ಇಂದು ನಷ್ಟದಲ್ಲಿದ್ದರೆ ಅದಕ್ಕೆ ರಾಜ್ಯ ಸರ್ಕಾರದ ಅದಕ್ಷತೆ, ಭ್ರಷ್ಟಾಚಾರ ಮತ್ತು ಕಾರ್ಪೋರೇಟ್ ಕಂಪೆನಿಗಳ ಓಲೈಕೆ ಕಾರಣ ಸಮರ್ಥನೀಯವಲ್ಲದ, ಅವೈಜ್ಞಾನಿಕ ಮತ್ತು ಜನವಿರೋಧಿಯಾಗಿರುವ ವಿದ್ಯುತ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ರಾಷ್ಟ್ರವ್ಯಾಪಿ ಹೋರಾಟ ತೀವ್ರ ಸ್ವರೂಪ ನಡೆಸಲಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲದ ದರ ಬ್ಯಾರೆಲ್ ಗೆ ಕಡಿಮೆ ಇದ್ದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿತ್ಯ ನಿರಂತರವಾಗಿ ಬೆಲೆ ಏರಿಕೆಯನ್ನು ಮಾಡುತ್ತಾ ಜನತೆಯ ಬದುಕನ್ನು ಬೀದಿಗೆ ತಂದಿವೆ. ಖರೀದಿಸುಬ ಶಕ್ತಿ ಜನತೆಯ ಬಳಿ ಇತ್ತ ಕಡೆ ಕೋವಿಡ್ ಸಂಕಷ್ಟ, ಲಾಕ್ ಡೌನ್ ಇದರ ನಡುವೆ ರಾತ್ರೋರಾತ್ರಿ ಬೆಲೆ ಏರಿಕೆ ಆಗುತ್ತವೆ. ಯುಪಿಎ ಸರ್ಕಾರ ಇರುವಾಗ ಒಂದು ರೂಪಾಯಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಆದಾಗ ಬೀದಿಗೆ ಇಳಿದು ಹೋರಾಟ ಮಾಡಿದ ಭಾಜಪ ಹಾಗೂ ಅದರ ನಾಯಕರಾದ ಈಗಿನ ಪ್ರಧಾನಿ ನರೇಂದ್ರ ಮೋದಿ, ಸ್ಮ್ರುತಿ ಇರಾನಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಳವೀಕಾ ಅವಿನಾಶ್ ಸೇರಿ ಅನೇಕರು ಈಗ ತುಟಿ ಬಿಚ್ಚದೆ ಕಾರ್ಪೊರೇಟ್ ಸಂಸ್ಥೆಗಳ ಪರ ನಿಂತಿದ್ದಾರೆ. ಆಚೇ ದಿನ ಹೇಳಿದ ಇವರು ಕಟ್ಟಿನ ಕೊಚ್ಚೆ ದಿನಗಳನ್ನು ನೀಡುತ್ತಿದ್ದಾರೆ ಇವರುಗಳನ್ನು ಮನೆಗೆ ಕಳುಹಿಸದೆ ಈ ದೇಶಕ್ಕೆ ಭವಿಷ್ಯ ಇಲ್ಲ ಎಂದು ಮಾತನಾಡಿದರು.

ನಂತರ ಈ ಹೋರಾಟವನ್ನು ಉದ್ದೇಶಿಸಿ ಶಿವಣ್ಣ ವಕೀಲ, ಜೈ ಭಾರತ್ ಸಂಘಟನೆಯ ಅಧ್ಯಕ್ಷರಾದ ಜಹಾಂಗೀರ್ ಪಾಷ, SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಮಾತನಾಡಿದರು.

ಈ ಸಂದರ್ಭಗಳಲ್ಲಿ DYFI ರಾಜ್ಯ ಸಮಿತಿ ಸದಸ್ಯರಾದ ಶಿವಪ್ಪ ಬ್ಯಾಗವಾಟ್, SFI ಕವಿತಾಳ ಘಟಕದ ಅಧ್ಯಕ್ಷ ಮೌನೇಶ ಬುಳ್ಳಾಪುರ, DYFI ಅಧ್ಯಕ್ಷರಾದ ಮೊಹಮ್ಮದ್ ರಫಿ, ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಿಂಗಪ್ಪ, ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಮೌನೇಶ ಹಿರೇ ಕುರುಬರ್, ದುರುಗೇಶ್, ದೇವರಾಜ, ಮೋಹನ್, ಮಲ್ಲಿಕಾರ್ಜುನ ಸೇರಿ ಅನೇಕರಿದ್ದರು.

Leave a Reply

Your email address will not be published. Required fields are marked *

error: Content is protected !!