ಲಿಂಗಸುಗೂರು ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕರ ಮನವಿ
ಲಿಂಗಸುಗೂರು : ತಾಲೂಕಿನ ಮುದಗಲ್‍ನ ಐತಿಹಾಸಿಕ ಕೋಟೆ ಉತ್ಸವ, ಲಿಂಗಸುಗೂರಲ್ಲಿ ಟ್ರೀ ಪಾರ್ಕ್, ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ಚೆಕ್‍ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್ ಸೇರಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಶಾಸಕ ಡಿ.ಎಸ್.ಹೂಲಗೇರಿ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕøತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾದ ಶಾಸಕ ಹೂಲಗೇರಿ, ರಾಜ್ಯದಲ್ಲಿಯೇ ಲಿಂಗಸುಗೂರು ಮತಕ್ಷೇತ್ರವನ್ನು ಅಭಿವೃದ್ಧಿಯ ಉತ್ತುಂಗಕ್ಕೇರಿಸುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೂರಾರು ಕೋಟಿ ರೂಪಾಯಿಗಳ ಅನುದಾನ ಸರಕಾರ ನೀಡಿದೆ. ಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಜೊತೆಗೆ ನೀರಾವರಿ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿದರು.
ಶಾಸಕ ಹೂಲಗೇರಿಯವರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆನ್ನಲಾಗುತ್ತಿದೆ.

