ರಾಯಚೂರು

ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ಲಿಂಗಸುಗೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಎಸಿ ಕಚೇರಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಕಳೆದ 200 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸುತ್ತಿದೆ. ಕೋವಿಡ್-19 ಸಂದರ್ಭದಲ್ಲಿ ರೈತರೊಂದಿಗೆ ಮಾತುಕತೆಗೆ ಬಾರದೇ ರೈತರ ವಿರುದ್ಧ ದಮನಕಾರಿ ನೀತಿಗಳನ್ನು ಅನುಸರಿಸುವುದನ್ನು ಕೇಂದ್ರ ಸರ್ಕಾರ ಮುಂದುವರೆಸಿದೆ. ಅಲ್ಲದೇ ಜನವಿರೋಧಿ ನೀತಿಗಳನ್ನು ಜಾರಿಗೆ ತಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮುಂದುವರೆಸಿಕೊಂಡು ಹೊರಟಿದೆ. ರಸಗೊಬ್ಬರ, ಬಿತ್ತನೆ ಬೀಜದ ಬೆಲೆಯನ್ನು ಏರಿಕೆ ಮಾಡಿದೆ. ಕೃಷಿ ಸಾಲವನ್ನು ಕಡಿಮೆ ಮಾಡಿ ಕೃಷಿ ಮಾರುಕಟ್ಟೆಯನ್ನು ಅತಂತ್ರಗೊಳಿಸಿದೆ. ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ರೈತರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಭತ್ತ, ಜೋಳ ಖರೀದಿ ಮಾಡಿದ ಹಣವನ್ನು ರೈತರಿಗೆ ಪಾವತಿಸಬೇಕು ಎಂದು ಒತ್ತಾಯಿಸಿದರು.


ಸಂಘಟನೆಯ ತಾಲೂಕು ಅದ್ಯಕ್ಷ ಅಮರೇಶ ಸರಕಾರ, ಕೃಷ್ಣಪ್ಪ ಜಂಗೀರಾಂಪುರತಾಂಡ, ಅಮರಪ್ಪ, ಶಂಕ್ರಪ್ಪ, ಲಾಲಪ್ಪ, ಭೀಮಪ್ಪ, ನಾರಾಯಣ, ಕ್ರಷ್ಟ್ಪ, ಲಾಲಪ್ಪ, ಬಸವರಾಜ ರಾಠೋಡ್ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!