ರಾಯಚೂರು

ಕಾಲೇಜು ವಿದ್ಯಾರ್ಥಿಗಳಿಗೆ ಮೂರು ದಿನಗಳ ಲಸಿಕಾ ಅಭಿಯಾನ

ಲಿಂಗಸುಗೂರು : ಸ್ಥಳೀಯ ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಸೋಮವಾರದಿಂದ ಬುಧವಾರದ ವರೆಗೆ ಮೂರು ದಿನಗಳ ಕಾಲ ನಡೆಯುವ ಲಸಿಕಾ ಅಭಿಯಾನವನ್ನು ಸಹಾಯಕ ಆಯುಕ್ತ ರಾಜಶೇಖರ ಡಂಬಳ್ ಉದ್ಘಾಟಿಸಿದರು.


ಸ್ಥಳೀಯ ಬಸವೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದ ಸರಕಾರಿ ಪದವಿ ಕಾಲೇಜು, ಉಮಾ ಮಹೇಶ್ವರಿ ಪದವಿ ಪೂರ್ವ ಕಾಲೇಜು, ವಿಸಿಬಿ ಕಾಲೇಜು, ಬಸವೇಶ್ವರ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈಗಾಗಲೇ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಹಲವು ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡಿದ್ದು, ಬಿಟ್ಟು ಹೋಗಿರುವವರು ಮೂರು ದಿನಗಳ ಕಾಲ ಬಸವೇಶ್ವರ ಕಾಲೇಜಿನಲ್ಲಿ ನಡೆಯಲಿರುವ ಲಸಿಕಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು.

ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆದು ಕೊರೊನಾ ಮಹಾಮಾರಿ ಮೆಟ್ಟಿನಿಲ್ಲಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.


ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ರುದ್ರಗೌಡ, ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ, ವಿಸಿಬಿ ಕಾಲೇಜು ಉಪನ್ಯಾಸಕ ಅಹ್ಮದ್ ಸರ್, ಸರಕಾರಿ ಪದವಿ ಕಾಲೇಜು ದೈಹಿಕ ನಿರ್ದೇಶಕ ಶಿವಾನಂದ ನರಹಟ್ಟಿ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!