ಲಿಂಗಸುಗೂರು : ಅಲ್ಪಸಂಖ್ಯಾತ ರೈತರಿಗೆ ಪಂಪ್‍ಸೆಟ್‍ಗಳ ವಿತರಣೆ
ಲಿಂಗಸುಗೂರು : 2018-19ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಶಾಸಕ ಡಿ.ಎಸ್.ಹೂಲಗೇರಿ ಪಂಪ್‍ಸೆಟ್‍ಗಳನ್ನು ವಿತರಣೆ ಮಾಡಿದರು.
ಸಮುದಾಯದ 12 ಜನ ರೈತ ಫಲಾನುಭವಿಗಳು ಈ ಯೋಜನೆಯಡಿ ಆಯ್ಕೆ ಮಾಡಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಭೂಪನಗೌಡ, ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ಎಂಡಿ ರಫಿ, ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳು ಸೇರಿ ಫಲಾನುಭವಿಗಳು ಈ ಸಂದರ್ಭದಲ್ಲಿ ಇದ್ದರು.
