ಮಲೇರಿಯಾ ವಿರೋಧಿ ಮಾಸಾಚರಣೆ : ಜಾಗೃತಿ ಜಾಥಾ
ಲಿಂಗಸುಗೂರು : ತಾಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಸರಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಜಾಥಾಕ್ಕೆ ಚಾಲನೆ ನೀಡಿದರು.
ಮಳೆಗಾಲವಾದ್ದರಿಂದ ಮನೆಯ ಸುತ್ತಮುತ್ತ ಕಲುಶಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಮನೆಯ ಸುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೊಳ್ಳೆಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಾಥಾದಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತರು ಸಾರ್ವಜನಿಕವಾಗಿ ಘೋಷಣೆ ಕೂಗುತ್ತಾ ಮನವರಿಕೆ ಮಾಡಿದರು.
