ರಾಯಚೂರು

ಸೆಮಿಸ್ಟರ್ ಪರೀಕ್ಷಾ ಪದ್ಧತಿ ರದ್ದುಗೊಳಿಸಲು ಎಐಡಿಎಸ್‍ಓ ಆಗ್ರಹ

ಲಿಂಗಸುಗೂರು : ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.


ಶಿರಸ್ತೆದಾರ ಶಾಲಂಸಾಬರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಇಡೀ ದೇಶವೇ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿರುವಾ ಪ್ರಸ್ತುವ ಸರಕಾರಗಳು ಕೈಗೆತ್ತಿಕೊಳ್ಳುತ್ತಿರುವ ವಿವಿಧ ಕ್ರಮಗಳು ಮತ್ತು ನೀತಿಗಳು ಮತ್ತಷ್ಟು ಜನರ ಬದುಕನ್ನು ಬರ್ಬರಗೊಳಿಸುತ್ತಿವೆ.

ವಿದ್ಯಾರ್ಥಿಗಳ ಜೀವನ ಮತ್ತು ಶೈಕ್ಷಣಿಕ ಬದುಕಿನ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲದಂತೆ ವರ್ತಿಸುತ್ತಿದೆ. ಪದವಿ, ಸ್ನಾತಕೋತ್ತರ, ಇಂಜಿನಿಯರ್ ವಿದ್ಯಾರ್ಥಿಗಳ ಪ್ರಸ್ತುತ ಸೆಮಿಸ್ಟರ್‍ನ ಪರೀಕ್ಷೆಗಳನ್ನು ನಡೆಸದೇ ಮುಂದಿನ ಸೆಮಿಸ್ಟರ್‍ನ ಆನ್‍ಲೈನ್ ತರಗತಿಗಳನ್ನು ನಡೆಸುತ್ತಿರುವುದು ಅಪ್ಪಟ ಅವೈಜ್ಞಾನಿಕವಾಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಅವರ ಮುಂದಿನ ಭವಿಷ್ಯಕ್ಕೆ ಮಾರಕವಾದ ನಡೆಯಾಗಿದೆ. ಕೂಡಲೇ ಸರಕಾರ ಎಚ್ಚೆತ್ತುಕೊಂಡು ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಬಾರದು. ಎಲ್ಲಾ ವಿದ್ಯಾರ್ಥಿಗಳಿಗೂ ಎರಡು ಡೋಸ್ ಉಚಿತ ಲಸಿಕೆ ನೀಡುವವರೆಗೂ ಆಫ್‍ಲೈನ್ ತರಗತಿ ಅಥವಾ ಪರೀಕ್ಷೆಗಳನ್ನು ನಡೆಸಬೇಕೆಂದು ಒತ್ತಾಯಿಸಿದರು.


ಸಂಘಟನೆ ಸದಸ್ಯರಾದ ಶರಣಪ್ಪ ಉದ್ಬಾಳ, ವಿಜಯಕುಮಾರ, ಪ್ರವೀಣ, ಚಂದ್ರು, ರಮೇಶ, ಕುಮಾರ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!