ಮಕ್ಕಳ ಆರೋಗ್ಯದತ್ತ ಕಾಳಜಿ ವಹಿಸಲು ಶಾಸಕರ ಕರೆ
ಲಿಂಗಸುಗೂರು : ಕೋವಿಡ್ ಮೂರನೇ ಅಲೆಯು ಮಕ್ಕಳ ಆರೋಗ್ಯದ ಮೇೀಲೆ ಪರಿಣಾಮಕಾರಿಯಾಗುತ್ತದೆ ಎನ್ನುವ ಮಾಹಿತಿ ತಜ್ಞರು ನೀಡಿದ್ದು, ಬರುವ ದಿನಗಳಲ್ಲಿ ಪಾಲಕರು ಮಕ್ಕಳ ಆರೋಗ್ಯದತ್ತ ಹೆಚ್ಚಿನ ಕಾಳಜಿ ವಹಿಸಬೇಕೆಂದು ಶಾಸಕ ಡಿ.ಎಸ್.ಹೂಲಗೇರಿ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ಥಳೀಯ ಗುರುಭವನದಲ್ಲಿ ಆಯೋಜಿಸಿದ್ದ ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕಾಂಶ ಪೌಡರ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಸಕಾಲಕ್ಕೆ ಮನೆ ಮನೆಗೆ ತೆರಳಿ ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಸರಕಾರದ ಪೌಷ್ಠಿಕ ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು. ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು. ಪಾಲಕರೂ ಅಪೌಷ್ಠಿಕತೆ ಮೆಟ್ಟಿ ನಿಲ್ಲಲು ಮುಂದಾಗಬೇಕೆಂದು ಹೇಳಿದರು.
ತಹಸೀಲ್ದಾರ್ ಚಾಮರಾಜ ಪಾಟೀಲ್, ಸಿಡಿಪಿಒ ಶರಣಮ್ಮ ಕಾರನೂರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ, ಪುರಸಭೆ ಉಪಾದ್ಯಕ್ಷ ಮಹ್ಮದ್ ರಫಿ, ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.
