ರಾಯಚೂರು

ಲಿಂಗಸುಗೂರು ಸಹಾಯಕ ಆಯುಕ್ತರಾಗಿ ರಾಹುಲ್ ಸಂಕನೂರ ಐಎಎಸ್

ಲಿಂಗಸುಗೂರು : ಲಿಂಗಸುಗೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ರಾಜ್ಯಪಾಲರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ಥರಕನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಮುಂದಿನ ಆದೇಶದವರೆಗೆ ಲಿಂಗಸುಗೂರು ಉಪವಿಭಾಗಧಿಕಾರಿಯಾಗಿದ್ದ ಕೆಎಎಸ್ ಶ್ರೇಣಿಯ ಅಧಿಕಾರಿ ರಾಜಶೇಖರ ಡಂಬಳ ಅವರನ್ನು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ಹುದ್ದೆಯ ನಿರೀಕ್ಷೆಯಲ್ಲಿದ್ದ 2019ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಸಂಕನೂರ ಅವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!