ರಾಯಚೂರು

ಭಾಜಪ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮಹಿಳೆಯರು ಸಜ್ಜಾಗಲು ಶಿವಕೃಷ್ಣಮ್ಮ ಕರೆ

ಲಿಂಗಸುಗೂರು : ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ಸಮೀಪಿಸುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಮಾಡುತ್ತಿರುವ ಬಿಜೆಪಿ ಸರಕಾರದ ಪರವಾಗಿ ಜನರಲ್ಲಿ ಸಾಕಷ್ಟು ಭರವಸೆಗಳು ಮೂಡಿವೆ. ಮಹಿಳಾ ಕಾರ್ಯಕರ್ತೆಯರು ಗ್ರಾಮೀಣ ಮಟ್ಟಕ್ಕೆ ತೆರಳಿ ಪ್ರತಿ ಬೂತ್ ಮಟ್ಟದಲ್ಲಿಯೂ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಲು ಸಜ್ಜಾಗಬೇಕೆಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಉಪಾದ್ಯಕ್ಷೆ ಶಿವಕೃಷ್ಣಮ್ಮ ಕರೆ ನೀಡಿದರು.


ಸ್ಥಳೀಯ ಭಾರತೀಯ ವೈದ್ಯಕೀಯ ಸಂಘದ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ದೃಷ್ಟಿಯಿಂದ ಹಾಗೂ ಸರಕಾರದ ಅಭಿವೃದ್ಧಿಪರ, ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟುವ ನಿಟ್ಟಿನಲ್ಲಿ ಮಹಿಳೆಯರು ಜಾಗೃತರಾಗಿ ಕೆಲಸ ಮಾಡಬೇಕು. ಪಕ್ಷ ಕಟ್ಟುವಲ್ಲಿ ಪುರುಷರಿಗಿಂತ ನಾವೇನೂ ಹಿಂದೆ ಇಲ್ಲ ಎನ್ನುವುದನ್ನು ರಾಷ್ಟ್ರ ಮತ್ತು ರಾಜ್ಯ ನಾಯಕರುಗಳಿಗೆ ಮನದಟ್ಟು ಮಾಡಿಕೊಡುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದರು.


ಕೋವಿಡ್ ವಾರಿಯರ್ಸ್‍ಆಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ತಾಲೂಕು ಅದ್ಯಕ್ಷೆ ಜಯಶ್ರೀ ಸಕ್ರಿ ಸಭೆಯ ಅದ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷೆ ವಿಜಯರಾಜೇಶ್ವರಿ ಗೋಪಶೇಟ್ಟಿ, ಮುಖಂಡರಾದ ಡಾ.ಶಿವಬಸಪ್ಪ, ಜಗನ್ನಾಥ ಕುಲಕರ್ಣಿ, ಶರಣಮ್ಮ ಕಾಮರೆಡ್ಡಿ, ಶಾರದಾ ರಾಠೋಡ್, ಸೀತಾ ನಾಯಕ, ಬಸಮ್ಮ ಯಾದವ್, ಶೋಭಾ ಕಾಟವಾ, ಸುಷ್ಮಾ, ಸೇರಿ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಮೋರ್ಚಾದ ಪ್ರದಾನ ಕಾರ್ಯದರ್ಶಿ ಶ್ವೇತಾ ಲಾಲಗುಂದಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!