ಪತ್ರಿಕಾ ದಿನಾಚರಣೆ : ಒಂಬತ್ತು ಪತ್ರಕರ್ತರಿಗೆ ಸನ್ಮಾನ
ಲಿಂಗಸುಗೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಸಮರಂಭ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ ತಾಲೂಕಿನ ಒಂಬತ್ತು ಜನ ಪತ್ರಕರ್ತರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಿವರಾಜ ಕೆಂಭಾವಿ ತಿಳಿಸಿದರು.
ಸ್ಥಳೀಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಆಗಸ್ಟ್ 3 ರಂದು ಹಮ್ಮಿಕೊಂಡಿರುವ ಸಮಾರಂಭದ ಉದ್ಘಾಟನೆಯನ್ನು ಕನ್ನಡ ಪ್ರಭ ಪತ್ರಿಕೆಯ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ್ ನೆರವೇರಿಸಿ, ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಶಾಸಕ ಡಿ.ಎಸ್. ಹೂಲಗೆರಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷೆ ಗದ್ದೆಮ್ಮ ಭೋವಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸತತ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಲಿಂಗಸುಗೂರು ತಾಲೂಕಿನಲ್ಲಿ ಆಯೋಜಿಸುತ್ತಿರುವ ಪತ್ರಿಕಾ ದಿನಾಚರಣೆ ಪತ್ರಕರ್ತರಲ್ಲಿನ ಉತ್ಸಾಹ ಇಮ್ಮಡಿಗೊಂಡಿದೆ.

