600ಕ್ಕೆ 600 ಅಂಕ ಪಡೆದ ಸಮ್ ಕಾಲೇಜು ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಲಿಂಗಸುಗೂರು : ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವ ಸ್ಥಳೀಯ ಶ್ರೀ ಉಮಾ ಮಹೇಶ್ವರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಸ್ವತಂತ್ರ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ
ಡಿ.ಎಸ್.ಹೂಲಗೇರಿ, ಸಹಾಯಕ ಆಯುಕ್ತ ರಾಹುಲ್ ಸಂಕನೂರು,ಭವಿಷ್ಯದಲ್ಲಿ ಉನ್ನತ ವ್ಯಾಸಾಂಗದ ಮಾಡುವ ಮೂಲಕ ದೇಶ ಸೇವೆಗೆ ಮುಂದಾಗುವಂತೆ ಸಲಹೆ ನೀಡಿದರು.
ಕಾಲೇಜು ಆಡಳಿತಾಧಿಕಾರಿ ವಿನಯಕುಮಾರ ಗಣಾಚಾರಿ, ಕಾಲೇಜು ಪ್ರಾಚಾರ್ಯರು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

