91 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕ ಹೂಲಗೇರಿ ಭೂಮಿಪೂಜೆ
ಲಿಂಗಸುಗೂರು : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಡಿ.ಎಸ್.ಹೂಲಗೇರಿಯವರು ಸೋಮವಾರ 91.31 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ಸಲ್ಲಿಸಿದರು.
2021-22ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಯಲಗಲದಿನ್ನಿ ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಕಾಮಗಾರಿ, ಜಾಲಿಬೆಂಚಿ ಗ್ರಾಮದ ಎಸ್.ಸಿ.ಕಾಲೀನಿಯಲ್ಲಿ ರಸ್ತೆ ನಿರ್ಮಾಣ 19.76 ಲಕ್ಷ ರೂಪಾಯಿ, ಸುವರ್ಣಗ್ರಾಮೋದಯ ಯೋಜನೆಯಡಿ 46.55 ಲಕ್ಷ ರೂಪಾಯಿ ವೆಚ್ಚದಲ್ಲಿ ಜಾಲಿಬೆಂಚಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ಸಲ್ಲಿಸಿದರು. ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹಾಗೂ ಗುತ್ತೇದಾರರಿಗೆ ಸೂಚನೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಭೂಪನಗೌಡ ಕರಡಕಲ್, ಪಿಕಾರ್ಡ್ ಬ್ಯಾಂಕ್ ಅದ್ಯಕ್ಷ ಮಹಾಂತೇಶ ಪಾಟೀಲ್, ಕಾಳಾಪೂರ ಗ್ರಾಮ ಪಂಚಾಯಿತಿ ಅದ್ಯಕ್ಷ ವಿಜಯಕುಮಾರ, ಮುಖಂಡರಾದ ಅಮರೇಶ ನಾಡಗೌಡ್ರು, ವಿರೇಶಸ್ವಾಮಿ, ಶರಣಬಸವ. ಬಸವರಾಜ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

