3.50 ಕೋಟಿ ರೂಪಾಯಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ : ಪರಿಶೀಲನೆ
ಲಿಂಗಸುಗೂರು : ತಾಲೂಕಿನ ಜವಲಿ ಜಡೆಯ ಶಂಕರಲಿಂಗ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಶಾಸಕ ಡಿ.ಎಸ್.ಹೂಲಗೇರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಐತಿಹಾಸಿಕ ದೇವಸ್ಥಾನದ ಜೀರ್ಣೋದ್ಧಾರಕ್ಕೆಂದು ಈಗಾಗಲೇ ಕೆಬಿಜೆಎನ್‍ಎಲ್‍ನಿಂದ 3.50 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಈ ದುಡ್ಡು ಸಾಲದೇ ಇರುವ ಪರಿಣಾಮ ಹೆಚ್ಚುವರಿಯಾಗಿ 3.50 ಕೋಟಿ ರೂಪಾಯಿಗಳ ಬೇಡಿಕೆ ಇಟ್ಟಿದ್ದು, ಮಂಜೂರಾತಿ ದೊರಕಿದೆ. ಆ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿ ಜೊತೆಗೆ ಉಧ್ಯಾನವನ, ಸಿಸಿ ರಸ್ತೆ ಸೇರಿ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಹೂಲಗೇರಿ ತಿಳಿಸಿದರು.
ಕೆಬಿಜೆಎನ್‍ಎಲ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

