ಲಿಂಗಸುಗೂರು : ಜಿಟಿಟಿಸಿ ಪ್ರವೇಶಕ್ಕೆ ಅ.8 ಕೊನೆ ದಿನ
ಲಿಂಗಸುಗೂರು : ಸ್ಥಳೀಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಉಚಿತ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದ್ದು, ಅ.8 ಕೊನೆಯ ದಿನವಗಿದೆ ಎಂದು ಕಾಲೇಜು ಪ್ರಾಚಾರ್ಯ ರಾಜಕುಮಾರ ಹೇಳಿದರು.
ಸ್ಥಳೀಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು. ಅಲ್ಲದೇ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ 2500 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ ಕಾಲೇಜು ಪ್ರಾಚಾರ್ಯರನ್ನು ಸಂಪರ್ಕಿಸಬಹುದು. ಅಥವಾ 9916231899, 9686484595, 8310600693 ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಿದ್ದಾರೆ.
