ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಅಕ್ರಮ : ಕ್ರಮಕ್ಕೆ ಒತ್ತಾಯ
ಲಿಂಗಸುಗೂರು : ಸಂಸದರ ಕನಸಿನ ಕೂಸಾಗಿರುವ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಅಕ್ರಮಗಳು ನಡೆಯುತ್ತಿದ್ದು, ಕೂಡಲೇ ನಿಯಮಾನುಸಾರ ಕೆಲಸ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಅವೈಜ್ಞಾನಿಕವಾಗಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ತಡೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.
ಸಹಾಯಕ ಆಯಕ್ತರ ಕಚೇರಿ ಅಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಸಂಸದ ರಾಜಾ ಅಮರೇಶ್ವರ ನಾಯಕರು ಆಸಕ್ತಿಯಿಂದ ಮೆನೆ-ಮನೆಗೆ ನೀರು ಪೂರೈಸುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಬೇಕಾದ ಅನುದಾನ ಮಂಜೂರು ಮಾಡಿಸಿ ಕಾಮಗಾರಿಯನ್ನೂ ಆರಂಭಿಸಲಾಗಿದೆ. ಆದರೆ, ಕಾಮಗಾರಿ ಗುತ್ತಿಗೆ ಪಡೆದವರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ. ಹೊಸತಾಗಿ ನಳಗಳ ಜೋಡಣೆ ಬದಲು ಹಳೆಯ ನಳಗಳಿಗೆ ಮೀಟರ್ ಅಳವಡಿಸುವ ಕೆಲಸ ನಡೆದಿದೆ. ಕೂಡಲೇ ಇದನ್ನು ತಡೆದು, ನಿಯಮಾನುಸಾರ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.
ಸಂಘಟನೆ ಅದ್ಯಕ್ಷ ಶರಣೋಜಿ ಪವಾರ್, ಶಿವು ಕೆಂಪು, ಬಸವರಾಜ, ಸೈಯದ್, ಸಲೀಮ್, ಮಹೇಶ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

