ಲಿಂಗಸುಗೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಕರವೇ ಆಗ್ರಹ
ಲಿಂಗಸುಗೂರು : ಪುರಸಭೆ ವ್ಯಾಪ್ತಿಯ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ(ಶೆಟ್ಟಿ ಬಣ)ದ ಕಾರ್ಯಕರ್ತರು ಆಗ್ರಹಿಸಿದರು.
ಪಟ್ಟಣದಲ್ಲಿ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು. ಬಸ್‍ನಿಲ್ದಾಣದಲ್ಲಿ ಸಂಚಾರಿ ಗ್ರಂಥಾಲಯ ವ್ಯಸವ್ಥೆ ಮಾಡಬೇಕು. ಎಪಿಎಂಸಿ ಆವರಣದಲ್ಲಿ ರೈತರಿಗೆ ಶೌಚಾಲಯ, ವಿಶ್ರಾಂತಿ ಗೃಹ ಸೇರಿ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು.
ಕಸಬಾಲಿಂಗಸುಗೂರು ಗ್ರಾಮದಲ್ಲಿ ಮಂಗಗಳ ಹಾವಳಿಯಿಂದ ಜನ ಬೇಸತ್ತಿದ್ದು, ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಸಹಾಯಕ ಆಯುಕ್ತರಿಗೆ ಬರೆದ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಂಘಟನೆ ಅದ್ಯಕ್ಷ ಆಂಜನೇಯ ಭಂಡಾರಿ, ಉಪಾದ್ಯಕ್ಷ ಭೀಮೇಶ ಎಲ್.ನಾಯಕ್, ವೆಂಕಟೇಶ ಉಪ್ಪಾರ್, ಅಮರಪ್ಪ ಡಿ.ರಥೋಡ್, ಸಲೀಮ್‍ಖಾನ್, ಮೌನೇಶ ಬಳ್ಳಾಪೂರ, ಸುರೇಶ ಚಲುವಾದಿ, ಶರತ್ ಕರಡಕಲ್ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

