ಗ್ರಾಮ ಪಂಚಾಯತ್ ಚುನಾವಣೆ: ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ
ಬೀದರ: 1ಡಿಸೆಂಬರ್ (ಕ.ವಾ.): ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬAಧಪಟ್ಟAತೆ ತುರ್ತಾಗಿ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ನವೆಂಬರ್ 30ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಸಿಇಓ, ಸಹಾಯಕ ಆಯುಕ್ತರು, ಎಲ್ಲ ತಹಸೀಲ್ದಾರರು ಹಾಗೂ ತಾಪಂ ಇಓ ಸೇರಿದಂತೆ ಇನ್ನೀತರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಚರ್ಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಯಾವುದೇ ದೂರುಗಳು ಬಾರದ ಹಾಗೆ ಚುನಾವಣೆಯನ್ನು ಕಾನೂನು ಬದ್ಧವಾಗಿ ನಡೆಸಬೇಕು. ಮತ್ತು ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಕಾರ್ಯವು ತುರ್ತಾಗಿ ನಡಯಬೇಕು. ರಾಜ್ಯ ಚುನಾವಣಾ ಆಯೋಗ ಹೊರಡಿಸಿದ ನಿಯಮಾನುಸಾರ ಚುನಾವಣೆಯು ಮುಕ್ತ, ನ್ಯಾಯಸಮ್ಮತ, ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕಿದೆ ಎಂದರು.
ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತಿಗಳ ಚುನಾವಣೆ ನಡೆಯಲಿದೆ. ಮೊದಲನೇ ಹಂತದಲ್ಲಿ ಬಸವಕಲ್ಯಾಣ ಉಪವಿಭಾಗದ ಬಸವಕಲ್ಯಾಣ, ಹುಲಸೂರ, ಹುಮ್ನಾಬಾದ್, ಚಿಟಗುಪ್ಪಾ, ಭಾಲ್ಕಿ ಮತ್ತು ಎರಡನೇ ಹಂತದಲ್ಲಿ ಬೀದರ ಉಪವಿಭಾಗದ ಬೀದರ, ಔರಾದ್ ಮತ್ತು ಕಮಲನಗರಗಳಲ್ಲಿ ನಡೆಯಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿ ಚುನಾವಣೆ ನಡೆಸಬೇಕಿದೆ ಎಂದು ತಿಳಿಸಿದರು.
ಚುನಾವಣೆಗೆ ಸಂಬAಧಪಟ್ಟAತೆ ವಿವಿಧ ಸಮಿತಿಗಳ ರಚನೆ ಮತ್ತು ನೋಡಲ್ ಅಧಿಕಾರಿಗಳ ನೇಮಕ ಕಾರ್ಯವು ತುರ್ತಾಗಿ ನಡೆಯಬೇಕು. ಚುನಾವಣೆ ಸಂಪೂರ್ಣ ಮೇಲುಸ್ತುವಾರಿಯನ್ನು ಸಮರ್ಪಕವಾಗಿ ನೋಡಿಕೊಳ್ಳುವುದು ಮತ್ತು ಇದಕ್ಕೆ ಸಕಾಲಕ್ಕೆ ಸಹಕರಿಸುವಂತೆ ಸಂಬAಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಬೇಕು ಎಂದರು.
ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಡಿಸೆಂಬರ್ 4ರಂದು ತರಬೇತಿಗೆ ಮತ್ತು ಪೊಲೀಂಗ್ ಆಫೀಸರ್‌ಗಳಿಗು ಕೂಡ ಮಾಸ್ಟರ್ ಟ್ರೇನರ್ ತರಬೇತಿಯನ್ನು ಈಗ ಒಂದು ಹಂತದಲ್ಲಿ ನೀಡಲು ಕೂಡಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಬೇರೆಡೆ ವರ್ಗಾವಣೆಯಾದ ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವೊಂದು ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ, ತಾಲ್ಲೂಕಾ ಮಟ್ಟದ ನೋಡೆಲ್ ಅಧಿಕಾರಿಗಳ ಬದಲಾವಣೆ ಪ್ರಕ್ರಿಯೆಯನ್ನು ಕೂಡಲೇ ನಡೆಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಅವರು ಮಾತನಾಡಿ, ಚುನಾವಣೆಯ ಪ್ರಚಾರ ಮತ್ತು ಚುನಾವಣೆಗೆ ಸಂಬAಧಿಸಿದ ಇನ್ನೀತರ ಕಾರ್ಯಕ್ರಮಗಳನ್ನು ಅನುಮತಿ ಪಡೆಯದೇ ನಡೆಸಬಾರದು. ಇದಕ್ಕೆ ಸಂಬAಧಿಸಿದAತೆ ಪತ್ರಿಕಾ ಪ್ರಕಟಣೆ ಹೊರಡಿಸಿ ವಿವರವಾಗಿ ತಿಳಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಗೋಪಾಲ ಎಂ.ಬ್ಯಾಕೋಡ್ ಅವರು ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲು ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಾಟೀಲ, ತಹಸೀಲ್ದಾರ ಗಂಗಾದೇವಿ ಸಿ.ಎಚ್., ಪೌರಾಯುಕ್ತರು, ಬೀದರ, ಭಾಲ್ಕಿ ಹಾಗೂ ಹುಮನಾಬಾದ್ ಪೊಲೀಸ್ ಉಪಾಧೀಕ್ಷಕರು, ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಹಾಗೂ ಇತರರು ಇದ್ದರು.

