ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಲಿ: ಆರ್. ರಾಮಚಂದ್ರನ್
ಬೀದರ: ಡಿಸೆಂಬರ್ 04 (ಕ.ವಾ), ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ಆರ್‌ಓ ಮತ್ತು ಎಆರ್‌ಓಗಳಿಗೆ ನಗರದ ಶ್ರೀ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮAದಿರದಲ್ಲಿ ಡಿಸೆಂಬರ್ 4ರಂದು ತರಬೇತಿ ನಡೆಯಿತು.ತರಬೇತಿಯನ್ನು ಉದ್ಘಾಟಿಸಿ ಜಿಲ್ಲಾಧಿಕಾರಿಗಳಾದ ಆರ್ ರಾಮಚಂದ್ರನ್ ಅವರು ಮಾತನಾಡಿ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜಾರಿಗೊಳಿಸಿರುವ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಾಮಪತ್ರ ಸಲ್ಲಿಕೆಯಿಂದ ಆರಂಭವಾಗಿ ಮತದಾನ, ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆವರೆಗೂ ನಿರ್ವಹಿಸಬೇಕಾದ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಸಲಹೆ ಮಾಡಿದರು.
ಬೀದರ ಜಿಲ್ಲೆಯಲ್ಲಿ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆಯ ಹೊಸತು ಏನೆಂದರೆ ಇವಿಎಂ ಯಂತ್ರಗಳನ್ನು ಬಳಸಲಾಗುತ್ತದೆ. ಇಡೀ ರಾಜ್ಯದಲ್ಲಿ ಬೀದರ ಜಿಲ್ಲೆಯಲ್ಲಿ ಮಾತ್ರ ಇವಿಎಂ ಮಸೀನುಗಳನ್ನು ಬಳಸಲಾಗುತ್ತದೆ. ಈ ಮಸೀನುಗಳನ್ನು ಹೇಗೆ ಬಳಸಬೇಕು. ಯಾವ ರೀತಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಚುನಾವಣೆಯ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಅರಿಯಬೇಕು ಎಂದು ಸೂಚಿಸಿದರು.ಈ ವೇಳೆ ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಅವರು, ಚುನಾವನಾ ಕಾರ್ಯವನ್ನು ಹೇಗೆ ಮಾಡಬೇಕು, ನಾಮ ಪತ್ರಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದು ಸೇರಿದಂತೆ ಹಲವಾರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ ಸಹಾಯಕ ಆಯುಕ್ತರಾದ ಗರೀಮಾ ಪನವಾರ, ಭಾಲ್ಕಿ, ಬೀದರ, ಬಸವಕಲ್ಯಾಣ, ಔರಾದ್, ಹುಮನಾಬಾದ್ ತಹಸೀಲ್ದಾರರು ಇದ್ದರು.201 ಆರ್‌ಒಗಳು ಮತ್ತು 211 ಎಆರ್‌ಓಗಳು: ಈ ಗ್ರಾಮ ಪಂಚಾಯತ್ ಚುನಾವನೆಯಲ್ಲಿ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿ (ಆರ್‌ಓ) ಎಂದು ಹಾಗೂ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳನ್ನು ಸಹಾಯಕ ಚುನಾವಣಾ ಅಧಿಕಾರಿಗಳು ಎಂದು ನಿಯೋಜಿಸಲಾಗಿದೆ. 201 ಆರ್‌ಒಗಳು ಮತ್ತು 211 ಎಆರ್‌ಓಗಳನ್ನು ತರಬೇತಿಗೆ ನಿಯೋಜಿಸಲಾಗಿತ್ತು.

