ಕ್ಷಯರೋಗ ಪತ್ತೆ, ಚಿಕಿತ್ಸಾ ಆಂದೋಲನ ಕಾರ್ಯಕ್ರಮ
ಲಿಂಗಸುಗೂರು : ಆರೋಗ್ಯ ಇಲಾಖೆ ವತಿಯಿಂದ ಸ್ಥಳೀಯ ಐಎಂಎ ಹಾಲ್‍ನಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, 2025ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಸರಕಾರ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ. ಡಿಸೆಂಬರ್ ತಿಂಗಳು ಪೂರ್ತಿಯಾಗಿ ಈ ಆಂದೋಲನ ಜರುಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂಧಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು.
ಸರಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ದಿಗಂಬರ್, ಡಾ.ಮೊಹಸಿನ್, ಡಾ.ರವಿಕಿರಣ, ಡಾ.ಅಬ್ದುಲ್ ಹನ್ನಾನ್, ಡಾ.ವಿಕ್ರಮ್, ಆರೋಗ್ಯ ಇಲಾಖೆಯ ಪ್ರಾಣೇಶ್, ರವಿಕುಮಾರ, ಮಹಾಂತೇಶ, ದೇವರಾಜ, ಅಮರೇಶ, ಮೋಹಿನ್‍ಪಾಷಾ ಸೇರಿ ಇತರರು ಇದ್ದರು.

