ಭೂ ಸುಧಾರಣಾ ತಿದ್ದುಪಡಿ ಕಾಯಿದೆಗ ಜೆಡಿಎಸ್ ಬೆಂಬಲ: ಜೆಡಿಎಸ್ ಕಚೇರಿಗೆ ಬಿಗಿ ಭದ್ರತೆ
ಬೆಂಗಳೂರು : ಭೂ ಸುಧಾರಣೆ ತಿದ್ದುಪಡಿ ಕಾಯಿದೆಗೆ ಜೆಡಿಎಸ್ ಬೆಂಬಲ ನೀಡಿದ ಹಿನ್ನೆಲೆ ಜೆಡಿಎಸ್ ಕಛೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
ಜೆಡಿಎಸ್ ಕಚೇರಿ ಬಳಿ ಕೆಲವು ರೈತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತರನ್ನು ಪೊಲೀಸರು ಜಾಗದಿಂದ ವಾಪಸ್ ಕಳುಹಿಸಿದ್ದಾರೆ, ಮತ್ತೆ ಜೆಡಿಎಸ್ ಕಚೇರಿ ಬಳಿ ರೈತರು ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

