ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಬಾಕಿ ಇರುವ ವೇತನ ಬಿಡುಗಡೆ ಮಾಡಲು SFI ಆಗ್ರಹ
ರಾಯಚೂರು :- ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಬಾಕಿ ಇರುವ ವೇತನ ಬಿಡುಗಡೆ ಮಾಡಲು ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ವರ್ಷದಿಂದ ಬಹುತೇಕ ಜಿಲ್ಲೆಯ SC ST ವಿದ್ಯಾರ್ಥಿಗಳಿಗೆ ಬಾಕಿ ಇರುವ ವೇತನ ನೀಡಲು ಪದವಿ, ಸ್ನಾತಕೋತ್ತರ, ವೃತ್ತಿಪರ ಸೇರಿ ಇತರೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಬಹುತೇಕ ವಿದ್ಯಾರ್ಥಿ ವೇತನ ಇಲ್ಲಿಯವರೆಗೂ ಮಂಜೂರಾಗಿಲ್ಲ, ಕೆಲವು ವಿದ್ಯಾರ್ಥಿಗಳಿಗೆ ಮಾತ್ರವೆ ಬಂದಿದೆ. ಇನ್ನೂ ನೂರಾರು ವಿದ್ಯಾರ್ಥಿಗಳಿಗೆ ಬರುವುದು ಬಾಕಿ ಇದೆ. ಕೊರೋನಾ ಸಂಕಷ್ಟದ ದಿನಗಳಲ್ಲಿ ಪಾಲಕ ಮತ್ತು ಪೋಷಕರಿಗೆ ಆದಾಯವಿಲ್ಲ ಹಾಗಾಗಿ ವಿದ್ಯಾರ್ಥಿಗಳಿಗೆ ಮುಂದಿನ ತರಗತಿ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗಲು ಹಣಕಾಸಿನ ತೊಂದರೆ ಉಂಟಾಗುತ್ತಿದೆ. ಬರುವ ವಿದ್ಯಾರ್ಥಿ ವೇತನವು ವಿಳಂಬವಾದ ಕಾರಣ ವಿದ್ಯಾರ್ಥಿಗಳು ಮತ್ತಷ್ಟು ಸಂಕಷ್ಟಕ್ಕೆ ಸಿಲುಕ ಶಿಕ್ಷಣ ವನ್ನು ಮೊಟಕು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದಾರೆ. ಆದ್ದರಿಂದ ಕೂಡಲೇ ಈ ಬಗ್ಗೆ ವಿಶೇಷ ಗಮನ ಸೂಕ್ತ ಮಾಹಿತಿ ಕಲೆಹಾಕಿಕೊಂಡು ಬಾಕಿ ಇರುವ ಎಲ್ಲಾ ಹಂತದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಬೇಕು ಹಾಗೂ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಪ್ರಕಾರದ ಹಾಸ್ಟೆಲ್ ಗಳನ್ನು ಹಂತ ಹಂತವಾಗಿ ಆರಂಭಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕೆಂದು, ಸಂಬಂಧಿಸಿದ ಇತರೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕೆಂದು ಇಲ್ಲದಿದ್ದರೆ ಭಾರತ ವಿದ್ಯಾರ್ಥಿ ಫೆಡರೇಶನ್ SFI ಜಿಲ್ಲಾ ಸಮಿತಿಯು ವಿದ್ಯಾರ್ಥಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಸಿ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಜಿಲ್ಲಾ ಮುಖಂಡ ಬಸವರಾಜ ದೀನ ಸಮುದ್ರ ಇದ್ದರು.

